ನವದೆಹಲಿ : ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಬಂಡಾಯವೆದ್ದಿರುವ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಅವರು ನಿನ್ನೆ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ದೆಹಲಿಗೆ ತೆರಳಿದರು.ಆದರೆ ಅಮಿತ್ ಶಾ ಅವರು ಈಶ್ವರಪ್ಪ ಅವರ ಭೇಟಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಇದೀಗ ಅವರು ವಾಪಸ್ ಆಗಿದ್ದಾರೆ.
ಅಮಿತ್ ಶಾ ಬೇಟಿಗೆ ಸಮಯ ಸಿಗದ ಕಾರಣ ಇದೀಗ ಈಶ್ವರಪ್ಪ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಬೆಳಗ್ಗೆ 6 10ರ ಫ್ಲೈಟ್ ಗೆ ಕೆ ಎಸ್ ಈಶ್ವರಪ್ಪ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ. ಇವಳೆ ಸುದ್ದಿಗಾರನಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ಬಿ ವೈ ರಾಘವೇಂದ್ರ ಸೋಲಲಿ ಎಂಬ ಪರೀಕ್ಷೆ ಅಮಿತ್ ಶಾ ಅವರಿಗೆ ಇರಬಹುದು ಎಂದು ತಿಳಿಸಿದರು.
BREAKING : ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತನ ಭೀಕರ ಹತ್ಯೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
ಕೇಂದ್ರ ಸಚಿವರ ಜೊತೆ ಸಭೆ ಸಾಧ್ಯವಾಗದಿರುವುದಕ್ಕೆ ದೆಹಲಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಈಶ್ವರಪ್ಪನವರು, ಬುಧವಾರ ರಾತ್ರಿ 10 ಗಂಟೆಯ ನಂತರ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿತ್ತು. ಆದರೆ, ಅಮಿತ್ ಶಾ ಅವರು ಭೇಟಿಗೆ ಲಭ್ಯವಿರುವುದಿಲ್ಲ ಎನ್ನುವ ಮಾಹಿತಿ ಬಂದಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಲೋಕಸಭೆ ಚುನಾವಣೆಯಲ್ಲಿ ಸೋಲಲಿ ಎನ್ನುವ ಅಪೇಕ್ಷೆ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಇರಬಹುದು ಎಂದು ಆರೋಪಿಸಿದರು.
ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ತಾವು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದು ಖಚಿತ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರನ್ನು ಸೋಲಿಸಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಕೈ ಬಲಪಡಿಸಲಾಗುವುದು. ಬಿಜೆಪಿ ಹೈಕಮಾಂಡ್, ತಾವು ಚುನಾವಣೆಗೆ ಸ್ಪರ್ಧಿಸುವುದನ್ನು ತಡೆಯಲು ಮತ್ತೆ ಮಾತುಕತೆಗೆ ಕರೆದರೆ ಹೋಗುವುದಿಲ್ಲ ಎಂದು ಈಶ್ವರಪ್ಪ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.