ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿ ಚುನಾವಣಾಧಿಕಾರಿ ಡಾ.ಕುಮಾರ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಕುಮಾರಸ್ವಾಮಿ ಗೆ ಗೋವಾ ಸಿಎಂ ಪ್ರಮೋದ್ ಸಾವಂತ್. ಮಾಜಿ ಸಿಎಂ, ಯಡಿಯೂರಪ್ಪ, ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಸಾಥ್ ನೀಡಿದ್ದಾರೆ.