ನವದೆಹಲಿ: ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದರು. ಇಂದು ಬೆಳಿಗ್ಗೆ (ಏಪ್ರಿಲ್ 04) ಗೌರವ್ ವಲ್ಲಭ್ ಕಾಂಗ್ರೆಸ್ನ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದರು.
ಗೌರವ್ ವಲ್ಲಭ್ ಅವರು ಸನಾತನ ವಿರೋಧಿ ಘೋಷಣೆಗಳನ್ನು ಕೂಗಲು ಸಾಧ್ಯವಿಲ್ಲ ಎಂದು ಹೇಳಿ ಕಾಂಗ್ರೆಸ್ನ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದರು. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿದ ರಾಜೀನಾಮೆ ಪತ್ರವನ್ನು ವಲ್ಲಭ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಪಕ್ಷವು ದಿಕ್ಕುದೆಸೆಯಿಲ್ಲದೆ ಚಲಿಸುತ್ತಿರುವ ರೀತಿಯಿಂದ ಆರಾಮದಾಯಕವಾಗಿಲ್ಲ. ನಾನು ಬೆಳಿಗ್ಗೆ ಮತ್ತು ಸಂಜೆ ಸನಾತನ ವಿರೋಧಿ ಘೋಷಣೆಗಳನ್ನು ಕೂಗಲು ಅಥವಾ ಸಂಪತ್ತಿನ ಸೃಷ್ಟಿಕರ್ತರನ್ನು ನಿಂದಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
#WATCH | Delhi: Former Congress leader Gourav Vallabh joins BJP, in the presence of BJP General Secretary Vinod Tawde. pic.twitter.com/NAc0kX22vW
— ANI (@ANI) April 4, 2024