ಮಂಡ್ಯ: ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರಿಗೆ 2500 ರೂ ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಕಂದಾಯ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ವೃತ್ತದ ವಿಎ ಸಿದ್ಧರಾಯ ಮಾಳಿ ಅವರು, ವಡ್ಡರಹಳ್ಳಿಯ ಶಿವಕುಮಾರ್ ಎಂಬುವರಿಗೆ ಆರ್ ಟಿಸಿಯಲ್ಲಿನ ಸಾಲದ ವಿವರಗಳನ್ನು ತೆಗೆದು ಹಾಕಲು 3000 ರೂ ಹಣಕ್ಕೆ ಬೇಡಿಕೆಯಿಟ್ಟಿದ್ದರು.
ಹೀಗಾಗಿ ವಿಎ ಸಿದ್ದರಾಯ ಮಾಳಿ ಅವರ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಮುಂಗಡವಾಗಿ ರೂ.2,500 ಲಂಚದ ಹಣವನ್ನು ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಆರ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ಸಂಬಂಧ ಸಿಆರ್ ಸಂಖ್ಯೆ 7/2024ಯು / ಎಸ್ 7 (ಎ) ಪಿಸಿ ಕಾಯ್ದೆ (ತಿದ್ದುಪಡಿ) 2018 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.
ಗಮನಿಸಿ: ಏ.9ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಕಾಲಾವಕಾಶ
ರಾಜ್ಯ ಸರ್ಕಾರ ತನ್ನ ಖಜಾನೆಯಿಂದ ಬರ ಪರಿಹಾರ ನೀಡಿ ಗಂಡಸ್ತನ ತೋರಿಸಲಿ- ಬೊಮ್ಮಾಯಿ