ಬೆಂಗಳೂರು: ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್ ಕುಮಾರ್ ವಿರುದ್ಧ ಕಿಡಿಗೇಡಿಯೊಬ್ಬ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದನು. ಈ ಪೋಸ್ಟ್ ವಿರುದ್ಧ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಜೊತೆಗೆ ಕಿಡಿಗೇಡಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಕಿಡಿಗೇಡಿ ವಿರುದ್ಧ FIR ದಾಖಲಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಆರ್ ಸಿಬಿ ಸೋಲಿಗೆ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರೇ ಕಾರಣ ಎಂಬುದಾಗಿ ಗಜಪಡೆ ಸೋಷಿಯಲ್ ಫೇಸ್ ಬುಕ್ ಪೇಜ್ ನಲ್ಲಿ ಕಿಡಿಗೇಡಿಯೊಬ್ಬ ಪೋಸ್ಟ್ ಮಾಡಿದ್ದನು.
ಸೋಷಿಯಲ್ ಮೀಡಿಯಾ ಪೋಸ್ಟ್ ನಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಆರ್ ಸಿ ಬಿ ಕಾರ್ಯಕ್ರಮಕ್ಕೆ ಬಂದಿದ್ದಕ್ಕೇ ತಂಡ ಸೋತಿದೆ ಎಂಬುದಾಗಿ ಅವಾಚ್ಯ ಶಬ್ದ ಬಳಸಿ ನಿಂದಿಸಿ, ಅವಹೇಳನ ಮಾಡಲಾಗಿತ್ತು.
ಈ ಪೋಷ್ಟ್ ಹಾಕಿದವರ ವಿರುದ್ಧ ಅಭಿಮಾನಿಗಳು, ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದರು. ಅಲ್ಲದೇ ಅಪ್ಪು ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆದರಿಸಿ, ಕಿಡಿಗೇಡಿಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
BREAKING: ನ್ಯೂಯಾರ್ಕ್ ನಗರದಲ್ಲಿ 4.8 ತೀವ್ರತೆಯ ಭೂಕಂಪ | Earthquake In New York City