ನವದೆಹಲಿ: ಎಎಪಿ ಮುಖಂಡ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಏಪ್ರಿಲ್ 18 ರವರೆಗೆ ವಿಸ್ತರಿಸಿದೆ.
ದೆಹಲಿ ಮದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಮನೀಶ್ ಸಿಸೋಡಿಯಾ ಅವರನ್ನು ಇಂದು ಬೆಳಿಗ್ಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಕರೆತರಲಾಯಿತು. ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ಸಂಸ್ಥೆಗಳಿಗೆ ಯಾವುದೇ ಹಣ ತನ್ನ ಕೈಗೆ ತಲುಪಿದೆ ಎಂದು ಸಾಬೀತುಪಡಿಸಲು ಸಾಧ್ಯವಾಗಿಲ್ಲ ಎಂದು ಎಎಪಿ ನಾಯಕ ಏಪ್ರಿಲ್ 2 ರಂದು ಆರೋಪಿಸಿದ್ದರು.
2021-22ರ ದೆಹಲಿ ಅಬಕಾರಿ ನೀತಿಯಲ್ಲಿನ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ಅವರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ನ್ಯಾಯಾಲಯ ವಿಚಾರಣೆ ನಡೆಸಿತು.