ಅಜ್ಮೇರ್(ರಾಜಸ್ಥಾನ): ಕಾಂಗ್ರೆಸ್ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪ್ರಣಾಳಿಕೆ ಸುಳ್ಳಿನ ಕಂತೆಯಾಗಿದೆ ಮತ್ತು ದಾಖಲೆಯ ಪ್ರತಿಯೊಂದು ಪುಟವೂ ಭಾರತವನ್ನು ಛಿದ್ರಗೊಳಿಸುವ ಪ್ರಯತ್ನಗಳನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.
ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಶುಕ್ರವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ರಾಜಸ್ಥಾನದ ಅಜ್ಮೀರ್ ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಕಾಂಗ್ರೆಸ್ ನ ಚಿಂತನೆಯು ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್ ನ ಚಿಂತನೆಯನ್ನು ಹೋಲುತ್ತದೆ ಎಂಬುದನ್ನು ಪ್ರಣಾಳಿಕೆ ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.”ನಿನ್ನೆ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು, ಇದು ಸುಳ್ಳುಗಳ ಕಂತೆ. ಇದರ ಪ್ರತಿಯೊಂದು ಪುಟವೂ ಭಾರತವನ್ನು ತುಂಡು ತುಂಡುಗಳಾಗಿ ಒಡೆಯುವ ವಾಸನೆಯನ್ನು ಬೀರುತ್ತದೆ. ಸ್ವಾತಂತ್ರ್ಯದ ಸಮಯದಲ್ಲಿ ಮುಸ್ಲಿಂ ಲೀಗ್ ನಲ್ಲಿದ್ದ ಅದೇ ಚಿಂತನೆಯನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪ್ರತಿಬಿಂಬಿಸಲಾಗಿದೆ. ಆ ಕಾಲದ ಮುಸ್ಲಿಂ ಲೀಗ್ನ ದೃಷ್ಟಿಕೋನಗಳನ್ನು ಇಂದು ಭಾರತದ ಮೇಲೆ ಹೇರಲು ಕಾಂಗ್ರೆಸ್ ಬಯಸಿದೆ” ಎಂದು ಪ್ರಧಾನಿ ಮೋದಿ ಹೇಳಿದರು.