ಬೆಂಗಳೂರು : ಬೆಂಗಳೂರಲ್ಲಿ ಇತ್ತೀಚಿನ ದಿನಗಳಲ್ಲಿ ಹಿಟ್ ಅಂಡ್ ರನ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಆನಂದ ನಗರದ ಸಮೀಪ ಹಿಟ್ ಅಂಡ್ ರನ್ ಗೆ ವೃದ್ದೆಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ.
ರಸ್ತೆ ದಾಟುವ ವೇಳೆ ವೃದ್ದೆಗೆ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸಿರೇಸಂದ್ರದ ನಾರಯಣಮ್ಮ(66) ಮೃತ ರ್ದುದೈವಿ. ಅಪಘಾತದ ಬಳಿಕ ಕಾರಿನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಆಸ್ಪತ್ರೆಯಿಂದ ವಾಪಸ್ ಮನೆಗೆ ತೆರಳುವಾಗ ಈ ಅವಘಡ ಸಂಭವಿಸಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.