ತುಮಕೂರು: ಲೋಕಸಭಾ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದಂತ ಯೂತ್ ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕು ಇರಿದಿರುವಂತ ಘಟನೆ ನಡೆದಿದೆ.
ತುಮಕೂರಿನ ಯೂತ್ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ತೆರಳಿದ್ದರು.
ಇದೇ ವಿಚಾರವಾಗಿ ತುಮಕೂರಲ್ಲಿ ಬಿಜೆಪಿಯ ಮೂವರಿಂದ ಯೂತ್ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಜೊತೆಗೆ ಜಗಳ ತೆಗೆದಿದ್ದಾರೆ. ಈ ಕಾರಣದಿಂದಲೇ ಜಗಳ ತಾರಕಕ್ಕೇರಿದ್ದು, ಚಾಕುವಿನಿಂದ ಇರಿದಿರೋದಾಗಿ ತಿಳಿದು ಬಂದಿದೆ.
ಚಾಕು ಇರಿತಕ್ಕೆ ಒಳಗಾಗಿದ್ದಂತ ಯೂತ್ ಕಾಂಗ್ರೆಸ್ ಕಾರ್ಯಕರ್ತನನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
‘UGC NET’ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
BREAKING : ಬೆಂಗಳೂರಲ್ಲಿ ‘ಹಿಟ್ ಅಂಡ್ ರನ್’ ಗೆ ವೃದ್ದೆ ಬಲಿ : ಕಾರು ಚಾಲಕ ಪರಾರಿ