ಬೆಂಗಳೂರು: 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ ಮೌಲ್ಯಾಂಕನದ ಫಲಿತಾಂಶವನ್ನು ದಿನಾಂಕ 08-04-2024ರ ಇಂದು
ಬೆಳಗ್ಗೆ ಶಾಲೆಗಳಲ್ಲಿ ಪ್ರಕಟಿಸಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಕಾರ್ಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗಿರುತ್ತದೆ ಎಂದಿದ್ದಾರೆ.
ಸದರಿ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ದಿನಾಂಕ: 02.04.2024 ರ ಒಳಗಾಗಿ ಬ್ಲಾಕ್ ಹಂತದಲ್ಲಿ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿ ಉತ್ತರ ಪತ್ರಿಕೆಗಳನ್ನು ಸಂಬಂಧಿಸಿದ ಶಾಲೆಗಳಿಗೆ ಮರುರವಾನಿಸಲು ಸೂಚಿಸಲಾಗಿತ್ತು. ಉಲ್ಲೇಖ 3 ರ ಮಾನ್ಯ ಆಯುಕ್ತರ ಸುತ್ತೋಲೆಯಂತೆ ದಿನಾಂಕ: 08.04.2024 ರ ಸಮುದಾಯದತ್ತ ಶಾಲಾ ದಿನದಂದು 1 ರಿಂದ 9 ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಲು ಸೂಚಿಸಿರುತ್ತಾರೆ ಎಂದಿದೆ.
5, 8 ಮತ್ತು 9ನೇ ತರಗತಿಗಳ ಮೌಲ್ಯಾಂಕನದ ಫಲಿತಾಂಶವನ್ನು ದಿನಾಂಕ: 08.04.2024 ರಂದು ಬೆಳಗ್ಗೆ: 9:00 ಗಂಟೆಯೊಳಗೆ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಪ್ರಕಟಿಸುವುದು. ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಫಲಿತಾಂಶ ಪ್ರಕಟಿಸಲು ಸೂಚಿಸಿದೆ ಹಾಗೂ ಎಲ್ಲಾ ಶಾಲೆಗಳಲ್ಲಿ ಮುಖ್ಯಶಿಕ್ಷಕರು/ಪ್ರಾಂಶುಪಾಲರು ಫಲಿತಾಂಶ ಪ್ರಕಟಿಸಿರುವ ಬಗ್ಗೆ ಉಪನಿರ್ದೆಶಕರು(ಆಡಳಿತ) ಮತ್ತು ಕ್ಷೇತ್ರಶಿಕ್ಷಣಾಧಿಕಾರಿಗಳು ಖಾತ್ರಿಪಡಿಸಿಕೊಂಡು ಮಂಡಲಿಗೆ ವರದಿ ಮಾಡುವಂತೆ ತಿಳಿಸಿದ್ದಾರೆ.
‘UGC NET’ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
ಲೋಕಸಭಾ ಚುನಾವಣೆಗೆ ‘ಮೋದಿ 3.0 ಕ್ರಿಯಾ ಯೋಜನೆ’ ರೆಡಿ: ಇಲ್ಲಿದೆ ಮಾಹಿತಿ | Modi 3.0