ಬಳ್ಳಾರಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ.ಇದೀಗ ಬಳ್ಳಾರಿ ನಗರದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಕೋಟಿ 50 ಲಕ್ಷ ನಗದು ಜಪ್ತಿ ಮಾಡಿಕೊಂಡಿರುವ ಘಟನೆ ಬಳ್ಳಾರಿ ನಗರದ ಭೂಸಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೌದು ಬಳ್ಳಾರಿ ನಗರಫಾ ಬ್ರೂಸ್ ಪೇಟೆ ಬ್ರೂಸ್ ಠಾಣಾ ವ್ಯಾಪ್ತಿ ಬಳಿ ಕಾರಿನಲ್ಲಿ ಸೂಕ್ತ ದಾಖಲೆಯಿಲ್ಲದೆ ಅಕ್ರಮವಾಗಿ ಹಣ ಸಾಗಿಸುತ್ತಿದ್ದರು. ಈ ವೇಳೆ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರಿಂದ ಕಾರಿನ ತಪಾಸಣೆ ನಡೆಸಲಾಯಿತು. ಈ ವೇಳೆ ನಗದು ಸುಮಾರು 5.50 ಕೋಟಿ ನಗದು ಪತ್ತೆಯಾಗಿದೆ. ಇವಳೆ ಹಣ ಸಾಗಿಸುತ್ತಿದ್ದವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ .