ಬೆಂಗಳೂರು : ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ 14 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರ ವಾಪಸ್ ಗೆ ಏಪ್ರಿಲ್ 8 ರ ಇಂದು ಕೊನೆಯ ದಿನವಾಗಿದೆ.
ರಾಜ್ಯದಲ್ಲಿ ಒಟ್ಟು 358 ಅಭ್ಯರ್ಥಿಗಳು 492ಉಮೇದುವಾರಿಕೆ ಸಲ್ಲಿಸಿದ್ದಾರೆ. ಈ ಪೈಕಿ 300 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿದ್ದು, ಉಳಿದವು ಅಮಾನ್ಯಗೊಂಡಿವೆ. ಇಂದು ಸಂಜೆ ವೇಳೆ 14 ಕ್ಷೇತ್ರಗಳಲ್ಲಿ ಕಣದಲ್ಲಿ ಉಳಿಯಲಿರುವ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಹೊರಬೀಳಲಿದೆ.
ಏಪ್ರಿಲ್, 26 ರಂದು ಮತದಾನ ನಡೆಯಲಿದ್ದು, ಜೂನ್, 04 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ
ಉಡುಪಿ-ಚಿಕ್ಕಮಗಳೂರು
ಹಾಸನ
ದಕ್ಷಿಣ ಕನ್ನಡ
ಚಿತ್ರದುರ್ಗ
ತುಮಕೂರು
ಮಂಡ್ಯ
ಮೈಸೂರು
ಚಾಮರಾಜನಗರ
ಬೆಂಗಳೂರು ಗ್ರಾಮಾಂತರ
ಬೆಂಗಳೂರು ಉತ್ತರ
ಬೆಂಗಳೂರು ದಕ್ಷಿಣ
ಚಿಕ್ಕಬಳ್ಳಾಪುರ
ಕೋಲಾರ