ಬೆಂಗಳೂರು : ಸಚಿವ ದಿನೇಶ್ ಗುಂಡೂರಾವ್ ಮತ್ತು ಅವರ ಕುಟುಂಬದ ಸದಸ್ಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ.
ಯತ್ನಾಳ್ ಅವರು ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ, ದೇಶ ವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ ಎಂದು ಹೇಳಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ದಿನೇಶ್ ಪತ್ನಿ ಟಬು ರಾವ್ ಅವರು ಯತ್ನಾಳ್ ವಿರುದ್ಧ ದೂರು ನೀಡಿದ್ದಾರೆ. ಈ ಹೇಳಿಕೆ ಸಂಬಂಧ ವಿಜಯಪುರದಲ್ಲೂ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.