ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಅವರ ಚುನಾವಣಾ ರ್ಯಾಲಿಯ ವೇಳೆ ಅಪಘಾತವಾಗಿದ್ದು ಓರ್ವ ವ್ಯಕ್ತಿ ಸಾವನಪ್ಪಿರುವ ಘಟನೆ ಬೆಂಗಳೂರಿನ ಕೆಆರ್ ಪುರದ ಬಳಿ ನಡೆದಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಕೆಆರ್ ಪುರದ ಗಣೇಶ ದೇಗುಲದ ಬಳಿ ಅಪಘಾತ ನಡೆದಿದೆ.ಪ್ರಚಾರದ ವೇಳೆ ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ ನಡೆದಿದ್ದು, ಈ ವೇಳೆ ಸ್ಕೂಟಿ ಸವಾರ ಪ್ರಕಾಶ್ (60) ಎನ್ನುವ ವ್ಯಕ್ತಿ ಸಾವನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ಮೃತ ಪ್ರಕಾಶ್ ಕೆಆರ್ ಪುರದ ಟಿಸಿ ಪಾಳ್ಯದ ನಿವಾಸಿ ಎಂದು ಹೇಳಲಾಗುತ್ತಿದೆ.
ಪ್ರಚಾರಕ್ಕೆ ಬಂದಿದ್ದ ಕಾರಿಗೆ ಡಿಕ್ಕಿ ಹೊಡೆದು ಪ್ರಕಾಶ ಗಾಯಗೊಂಡಿದ್ದರು.ಕಾರು ಡೋರ್ ಗೆ ಡಿಕ್ಕಿ ಹೊಡೆದು ಸ್ಕೂಟಿ ಪ್ರಕಾಶ್ ಗಾಯಗೊಂಡಿದ್ದ ಎನ್ನಲಾಗಿದೆ.ಈ ವೇಳೆ ತಕ್ಷಣ ಕೆ.ಆರ್.ಪುರದ ಸರ್ಕಾರಿ ಆಸ್ಪತ್ರೆಗೆ ಗಾಯಾಳು ವೆಂಕಟೇಶ್ ಅವರನ್ನು ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಪ್ರಕಾಶ್ 35 ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕೆಆರ್ ಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.