ಬೆಂಗಳೂರು : ಮುಸ್ಲಿಂ ಮಹಿಳೆಯರ ವಿರುದ್ಧ ಆರ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟ ಅವರು ಶಾಶ್ವತ ಗಂಡ ಎಂಬ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಅವರಿಗೆ ಬಿಗ್ ರಿಲೀಫ್ ನೀಡಿದೆ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಬಾಲಕೃಷ್ಣನ್ ನೇಮಕಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಡಿಸೆಂಬರ್ 24ರಂದು ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, ವಿವಾದಾತ್ಮಕ ಹೇಳಿಕೆ ನೀಡಿದ್ದರು. ‘ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡಂದಿರು. ಅವರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದೇ ಮೋದಿ ಸರ್ಕಾರ’ ಎಂದು ಭಟ್ ಹೇಳಿದ್ದರು.
ಬೆಂಗಳೂರು : ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ‘BMTC’ ಚಾಲಕನ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ
ಇನ್ನು ಈ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ದೂರು ನೀಡಿದ್ದರು. ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಭಾಕರ್ ಭಟ್ ವಿರುದ್ಧ IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್‌ಐಆರ್ ದಾಖಲಲಾಗಿದೆ. ಇದೀಗ ಈ ಎಫ್‌ಐಆರ್ ರದ್ದು ಕೋರಿ ಭಾಕರ್ ಭಟ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಬೆಂಗಳೂರು : ಮಾಮೂಲಿ ಕೊಡುವಂತೆ ‘ಫೇಕ್ ಪೊಲೀಸ್’ ನಿಂದ ಮಂಗಳಮುಖಿಯರಿಗೆ ಕಿರುಕುಳ:ರಕ್ಷಣೆ ಕೋರಿ ಪೋಲೀಸರ ಮೊರೆ
ಇದೀಗ ಈ ಪ್ರಕರಣದಲ್ಲಿ ಅಭಿಯೋಜಕರಾಗಿ ಎಸ್.ಬಾಲಕೃಷ್ಣನ್ ಅವರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಈ ನೇಮಕ ಪ್ರಶ್ನಿಸಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇಂದು (ಏಪ್ರಿಲ್ 08) ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಎಸ್.ಬಾಲಕೃಷ್ಣನ್ ನೇಮಕಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.