ಉತ್ತರಕನ್ನಡ : ರಾಜ್ಯದಲ್ಲಿ ತೀವ್ರ ಬಿಸಿ ಗಾಳಿ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಹನಿ ನೀರಿಗೂ ಜನ ಪರದಾಡುತ್ತಿದ್ದಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಬಿಸಿಲಿನ ತಾಪಕ್ಕೆ ಚಲಿಸುತ್ತಿದ್ದ ಕಾರೊಂದು ಹೊತ್ತಿ ಹೊಡೆದಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಪಟ್ಟಣದಲ್ಲಿ ಬಿಸಿಲಿನ ತಾಪಕ್ಕೆ ಚಲಿಸುತ್ತಿದ್ದ ಕಾರು ಒಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ.ಅದೃಷ್ಟವಶಾತ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗುತ್ತಿದೆ.ಘಟನೆ ಕುರಿತಂತೆ ದಾಂಡೇಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.