ಬೆಂಗಳೂರು : ಬೆಂಗಳೂರಲ್ಲಿ ಹನಿ ನೀರಿಗೂ ಜನ ಪರದಾಡುತ್ತಿದ್ದಾರೆ. ಇದರ ಮಧ್ಯ ಬಿಸಿಲಿನ ತಾಪಕ್ಕೆ ಜನ ರೋಸಿ ಹೋಗಿದ್ದಾರೆ. ಅಲ್ಲದೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾವೇರಿ ನೀರನ್ನು ಕುಡಿಯಲು ಬಿಟ್ಟು ಅನ್ಯಬಳಕೆ ಮಾಡದಂತೆ ಆದೇಶ ಹೊರಡಿಸಿತ್ತು. ಆದರೆ ಇಲ್ಲೊಬ್ಬ ವ್ಯಕ್ತಿ ಯುಗಾದಿ ಹಬ್ಬಕ್ಕೆಂದು ಬೈಕ್ ತೊಳೆದಿದ್ದರಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಿಬ್ಬಂದಿ 5,000 ರೂ. ದಂಡ ವಿಧಿಸಿದ್ದಾರೆ.
ಕೋಲಾರ : ಕೃಷಿ ಹೊಂಡದಲ್ಲಿ ಈಜಲು ತೆರಳಿದ ಯುವಕ : ಹೊರಬರಲು ಸಾಧ್ಯವಾಗದೆ ಸಾವು
ಹೌದು ಬೆಂಗಳೂರಿನ ವಿಜ್ಞಾನ ನಗರದಲ್ಲಿ ಬೈಕ್ ತೊಳೆಯುತ್ತಿದ್ದ ವ್ಯಕ್ತಿಗೆ ದಂಡ ದಂಡ ಹಾಕಲಾಗಿದೆ.ಯುಗಾದಿ ಹಬ್ಬದ ದಿನ ಗೃಹಬಳಕೆ ಹಾಗೂ ಕುಡಿಯುವ ಉದ್ದೇಶಕ್ಕೆ ಪೂರೈಸಲಾದ ನೀರನ್ನ ಅನ್ಯ ಬಳಕೆಗೆ ಬಳಕೆ ಮಾಡಿದವರಿಗೆ ಜಲಮಂಡಳಿ ಸಿಬ್ಬಂದಿ ದಂಡ ಹಾಕಿದ್ದಾರೆ.
ಜಲಮಂಡಳಿಯ ಆದೇಶವನ್ನು ಉಲ್ಲಂಘನೆ ಮಾಡಿದ ಪ್ರತಿಯೊಬ್ಬರಿಗೂ ತಲಾ 5 ಸಾವಿರ ರೂ. ದಂಡ ಹಾಕಲಾಗಿದೆ. ಜಲಕ್ಷಾಮದ ಮಧ್ಯೆ ಎಚ್ಚರಿಕೆ ವಹಿಸಿದೇ ಕುಡಿಯುವ ನೀರಿನಲ್ಲಿ ಬೈಕ್ ತೊಳೆಯುತ್ತಿದ್ದ ವ್ಯಕ್ತಿಗೆ ದಂಡ ಹಾಕಲಾಗಿರುವ ವಿಡಿಯೋ ವೈರಲ್ ಆಗುತ್ತಿದೆ.
`ವಾಟ್ಸಪ್’ ಬಳಕೆದಾರರೇ ಎಚ್ಚರ : ಈ 3 ಸಂದೇಶಗಳ ಮೇಲೆ ಕ್ಲಿಕ್ ಮಾಡಿದ್ರೆ ನಿಮ್ಮ ಖಾತೆಯಲ್ಲಿರುವ ಹಣವೇ ಖಾಲಿ!
ಕಳೆದ ಒಂದು ತಿಂಗಳಿಂದ ಕುಡಿಯುವ ನೀರನ್ನು ಅನ್ಯ ಬಳಕೆಗೆ ಉಪಯೋಗಿಸುತ್ತಿರುವ ಜನರಿಗೆ ಜಲಮಂಡಳಿ ಅಧಿಕಾರಿಗಳು ದಂಡ ಹಾಕುತ್ತಿದ್ದಾರೆ. ಇದುವರೆಗೂ ಬರೋಬ್ಬರಿ 365 ಜನರಿಗೆ ದಂಡ ಹಾಕಲಾಗಿದೆ. ಈ ಪೈಕಿ 362 ಜನರಿಂದ ಬರೋಬ್ಬರಿ 19 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.