ಬೆಂಗಳೂರು : ಬೆಂಗಳೂರಿನಲ್ಲಿ ದಿಂಬಿನಿಂದ ಉಸಿರುಗಟ್ಟಿಸಿ ಇಬ್ಬರು ಮಕ್ಕಳ ತಾಯಿಯೊಬ್ಬಳು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಆಂಧ್ರಮೂಲದ ಗಂಗಾದೇವಿ ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ. ಮೃತ ಮಕ್ಕಳನ್ನು ಲಕ್ಷ್ಮಿ (9) ಹಾಗೂ ಗೌತಮ್ (7) ಎಂದು ಗುರುತಿಸಲಾಗಿದ್ದು, ಸದ್ಯ ಗಂಗಾದೇವಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಂಧ್ರ ಮೂಲದ ಗಂಗಾದೇವಿ ಪತಿ ಪೋಕ್ಸೋ ಕೇಸ್ ನಲ್ಲಿ ಇದ್ದಾನೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗಂಗಾದೇವಿ ಇಬ್ಬರನ್ನು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.