ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಟಕ ಮಾಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (Karnataka School Examination and Assessment Board -KSEAB) ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಲಾಗಿದೆ.
ಅಂದ ಹಾಗೇ ಪ್ರತೀ ವರ್ಷದಂತೆ ಈ ಬಾರಿ ಕೂಡ ಬಾಲಕಿಯರೇ (80.25%) ಮೇಲುಗೈ ಸಾಧಿಸಿದ್ದಾರೆ. ವಿಜ್ಞಾನ ವಿಭಾಗ 89.96% , ವಾಣಿಜ್ಯ ವಿಭಾಗ 80.94%, ಕಲಾ ವಿಭಾಗದಲ್ಲಿ 68.36 % ಫಲಿತಾಂಶ ಬಂದಿದೆ. ಇನ್ನೂ ಯಾವ ಜಿಲ್ಲೆ ಮೊದಲು ಯಾವ, ಜಿಲ್ಲೆ ಕೊನೆ ಎನ್ನುವುದನ್ನು ನೋಡುವುದಾದ್ರೆ?
ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿ ಗಳು – 6,98,378
ತೇರ್ಗಡೆಯಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 5,52690
ಶೇಕಾಡ 85% ಹಾಗೂ ಅದಕ್ಕಿಂತ ಹೆಚ್ಚಿನ ಅಂಕ – 1,53,370
ಶೇಕಡಾ 60% – 2,89733
ದ್ವಿತೀಯ ದರ್ಜೆ- 72,098
ತೃತೀಯ ದರ್ಜೆಯಲ್ಲಿ ಉತ್ತೀರ್ಣರಾದವರು – 37,489