ಬೆಂಗಳೂರು : ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ದಾಖಲೆ ಒದಗಿಸುವಂತೆ. ಇದೀಗ ಲೋಕಾಯುಕ್ತ ಸಂಸ್ಥೆ ನೋಟೀಸ್ ನೀಡಿದೆ.
ಅಕ್ರಮ ಆಸ್ತಿಗಳಿಗೆ ಪ್ರಕರಣದಲ್ಲಿ ಸರ್ಕಾರ ಸಿ ಬಿ ಐ ತನಿಖೆಯನ್ನು ರದ್ದು ಮಾಡಿತ್ತು ಲೋಕಾಯುಕ್ತ ತೆನಿಕೆಗೆ ಆದೇಶ ಮಾಡಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತ ಸಂಸ್ಥೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಸಿಬಿಐ ನೀಡಿರುವ ದಾಖಲೆಗಳನ್ನು ನಮಗೂ ನೀಡಿ ಎಂದು ಇದೀಗ ಲೋಕಾಯುಕ್ತ ಸಂಸ್ಥೆ, ನೋಟಿಸ್ ನೀಡಿದೆ . ಸಿವಿಯಾಗೆ ನೀಡಿರುವ ದಾಖಲೆ ಮಾಹಿತಿ ಒದಗಿಸುವಂತೆ ಡಿಕೆ ಶಿವಕುಮಾರ್ ಅವರಿಗೆ ಲೋಕಾಯುಕ್ತ ಸಂಸ್ಥೆ ನೀಡಿದೆ.
ಏನಿದು ಪ್ರಕರಣ?
ಎರಡು ವರ್ಷಗಳ ಹಿಂದೆ, ಅಂದರೆ ಅಕ್ಟೋಬರ್ 2020ರಲ್ಲಿ ಡಿಕೆಶಿ ವಿರುದ್ಧ ಸಿಬಿಐ ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣ ದಾಖಲಾಗಿತ್ತು. ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬದ ಸದಸ್ಯರು ₹ 74.93 ಕೋಟಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎನ್ನುವುದು ಸಿಬಿಐ ಆರೋಪಿಸಲಾಗಿತ್ತು. ಮಾರ್ಚ್ 2020ರಿಂದ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಬಿಐ ಅಕ್ಟೋಬರ್ 5, 2020ರಲ್ಲಿ ದೆಹಲಿ, ಮುಂಬೈ ಸೇರಿದಂತೆ 14 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ, ಕಂಪ್ಯೂಟರ್ ಹಾರ್ಡ್ಡಿಸ್ಕ್, ₹ 57 ಲಕ್ಷ ನಗದು ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು.
ನಂತರದ ದಿನಗಳಲ್ಲಿ ಜಾರಿ ನಿರ್ದೇಶನಾಲಯವು ಡಿ.ಕೆ.ಶಿವಕುಮಾರ್ ಆಸ್ತಿ ಗಳಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ಆರಂಭಿಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ದೆಹಲಿಯ ಇಡಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ವಿಚಾರಣೆ ಎದುರಿಸಿದ್ದರು. ಜೈಲಿಗೂ ಹೋಗಿದ್ದರು.ಏಪ್ರಿಲ್ 2013ರಿಂದ ಏಪ್ರಿಲ್ 2018ರ ಅವಧಿಯಲ್ಲಿ ಮಂತ್ರಿಯಾಗಿದ್ದಾಗ ಡಿ.ಕೆ.ಶಿವಕುಮಾರ್ ಮತ್ತು ಕುಟುಂಬ ಸದಸ್ಯರು ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮಾಡಿದ್ದಾರೆ ಎನ್ನುವ ಆರೋಪ ಎದುರಿಸಿದ್ದರು.ಇದೀಗ ಲೋಕಾಯುಕ್ತ ಸಂಸ್ಥೆ ಸಿಬಿಐ ನೀಡಿರುವ ದಾಖಲೆಗಳನ್ನು ನಮಗೂ ನೀಡಿ ಎಂದು ನೋಟಿಸ್ ನೀಡಿದೆ .