ನವದೆಹಲಿ: ಹರಿಯಾಣದ ಮಹೇಂದ್ರಗಢ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ಸುಮಾರು 40 ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲಾ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಆರು ಮಕ್ಕಳು ಸಾವನ್ನಪ್ಪಿದ್ದಾರೆ. ಈದ್-ಉಲ್-ಫಿತರ್ ರಜಾದಿನದ ಹೊರತಾಗಿಯೂ ಬಸ್ ಶಾಲೆಗೆ ಹೋಗುತ್ತಿತ್ತು ಎನ್ನಲಾಗಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಮಹೇಂದ್ರಗಢದಲ್ಲಿ ವಾಹನವನ್ನು ಓವರ್ಟೇಕ್ ಮಾಡುವಾಗ ಬಸ್ ಪಲ್ಟಿಯಾಗಿದೆ. ಈ ಅಪಘಾತದಿಂದಾಗಿ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. “ಹಲವಾರು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಖಾಸಗಿ ಬಸ್ ಜಿಎಲ್ ಪಬ್ಲಿಕ್ ಶಾಲೆಗೆ ಸೇರಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಅಪಘಾತದ ನಂತರ ಸ್ಥಳೀಯರು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.