ಬೆಂಗಳೂರು : ರಾಜ್ಯದಲ್ಲಿ ಮುಂದಿನ 3 ಗಂಟೆಗಳ ಕಾಲ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹಾಗಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಒಟ್ಟು ಒಂಬತ್ತು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ರಾತ್ರಿ 10 ಗಂಟೆಯ ನಂತರ ಪ್ರಚಾರ ಮಾಡಿದ ಆರೋಪ : ಅಣ್ಣಾಮಲೈ ವಿರುದ್ಧ FIR
ಅದೇ ರೀತಿಯಾಗಿ ದಾವಣಗೆರೆ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದೂ, 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಾಗಲಕೋಟೆ,ಧಾರವಾಡ, ಗದಗ, ವಿಜಯಪುರ, ಹಾವೇರಿ, ಕೊಪ್ಪಳ, ಕೊಡಗು, ಯಾದಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲೂ ಮಳೆಯ ಸಾಧ್ಯತೆ ಇದೆ ಎನ್ನಲಾಗಿದೆ.
‘ಅಂಬೇಡ್ಕರ್ ಬಂದ್ರೂ ಸಾಧ್ಯವಿಲ್ಲ…’: ‘ಸಂವಿಧಾನ ಅಪಾಯದಲ್ಲಿದೆ’ ಎಂಬ ಆರೋಪಕ್ಕೆ ಪ್ರಧಾನಿ ಮೋದಿ ತಿರುಗೇಟು
ಮುಂದಿನ 3 ಗಂಟೆಗಳ ಕಾಲ ಗಾಳಿ ಬೀಸಲಿದ್ದು ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್ ಘೋಷಣೆ ಮಾಡಿದ್ದೂ, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಗಂಟೆಗೆ 30 ರಿಂದ 40 km ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.