ಮೈಸೂರು : ಇತ್ತೀಚಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭ್ರಷ್ಟರನ್ನು ಜೈಲಿಗೆ ಕಳುಹಿಸುವುದೇ ನನ್ನ ಕರ್ತವ್ಯ ಎಂದು ಹೇಳಿಕೆ ನೀಡಿದ್ದಾರೆ ಈ ಒಂದು ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು ಚುನಾವಣಾ ಬಾಂಡ್ ಗಳ ಮೂಲಕ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿದ ಬಿಜೆಪಿ ಯಾಕೆ ತೆರಿಗೆ ಕಟ್ಟಿಲ್ಲ ಎಂದು ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ನಿಮ್ಗೆ ಗೊತ್ತಾ.? ಮಾನವನ ದೇಹದಲ್ಲಿ ಈ ಅಂಗಗಳು ಇಲ್ಲದಿದ್ರು ನೂರು ವರ್ಷ ಬದುಕಬಹುದು.!
ಇಂದು ಅವರು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಳಲಿ ಸಮೀಪ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಸಾಕ್ಷ್ಯ ಇಲ್ಲದಿದ್ದರೂ ಜೈಲಿಗೆ ತಳ್ಳಿದ್ದಾರೆ. ಅದೇ ಐ.ಟಿ. ಇ.ಡಿ.ಯಂತಹ ಸಂಸ್ಥೆಗಳು ಬಿಜೆಪಿ ನಾಯಕರನ್ನು ಯಾಕೆ ಪ್ರಶ್ನಿಸುವುದಿಲ್ಲ ಎಂದು ಕೇಳಿದರು.
ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ :ವಿಜಯಪುರದಲ್ಲಿ ಸಿಡಿಲಿನ ಹೊಡೆತಕ್ಕೆ ಮೂವರು ಬಲಿ
ಬಿಜೆಪಿ ರಾಜ್ಯದಲ್ಲಿ ಎಂದು ಪೂರ್ಣ ಜನಾಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿಲ್ಲ. ಅವರಿಗೆ ಮುಂಬಾಗಿಲ ರಾಜಕಾರಣ ಗೊತ್ತಿಲ್ಲ. ಆಪರೇಷನ್ ಕಮಲ ಹೆಸರು ಬಂದಿದ್ದೇ ಯಡಿಯೂರಪ್ಪ ಅವರಿಂದ’ ಎಂದು ಲೇವಡಿ ಮಾಡಿದರು. ‘ ಸಿದ್ದರಾಮಯ್ಯ ರಿಂದ ಸಮ್ಮಿಶ್ರ ಸರ್ಕಾರ ಬಿತ್ತು ಎನ್ನುತ್ತಿದ್ದ ಕುಮಾರಸ್ವಾಮಿ ಈಗ ಡಿಕೆಶಿಯತ್ತ ಬೆರಳು ಮಾಡುತ್ತಿದ್ದಾರೆ. ಆದರೆ ನಿಜವಾಗಿ ಸರ್ಕಾರ ಬೀಳಿಸಿದ್ದು ಯಡಿಯೂರಪ್ಪ ಎಂದರು.