ಮೈಸೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲ ಪಕ್ಷಗಳು ಭರ್ಜರಿಯಾಗಿ ಚುನಾವಣಾ ಪ್ರಚಾರ ಮಾಡುತ್ತಿದ್ದು ಇಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜೈ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶ ನಡೆಯುತ್ತಿದ್ದು ಈ ಒಂದು ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ಆಡೋ ಹೈಕ್ಳಿಗೆ ಅಧಿಕಾರ ಕೊಟ್ಟರೆ ಹೊಡೆ ಗದ್ದೆ ಕುಯ್ತಿದ್ದರಂತೆ ಎಂದು ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ಕುರಿತಾಗಿ ಲೇವಡಿ ಮಾಡಿದರು.
ಆಡೋ ಹೈಕ್ಳಿಗೆ ಅಧಿಕಾರ ಕೊಟ್ಟರೆ ಹೊಡೆ ಗದ್ದೆ ಕುಯ್ತಿದ್ದರಂತೆ ಎಂದು ಕಾಂಗ್ರೆಸ್ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶ ನಡೆಯುತ್ತಿದ್ದು, ಈ ಒಂದು ಸಮಾವೇಶದಲ್ಲಿ ಮಾತನಾಡಿದ ಅವರು ಜೆಡಿಎಸ್ ಬಗ್ಗೆ ಮಾತನಾಡುವುದು ಬೇಡ ಬಿಡಿ ಎಂದರು.
ಜೆಡಿಎಸ್ ವರಿಷ್ಠ ದೇವೇಗೌಡರು ಕುಮಾರಸ್ವಾಮಿಗೆ ಅಧಿಕಾರ ಕೊಟ್ಟರು. ಈಗ ಜೆಡಿಎಸ್ ಅನ್ನ ಹೆಚ್ಡಿ ಕುಮಾರಸ್ವಾಮಿ ಬಿಜೆಪಿಗೆ ಮಾರಿಬಿಟ್ಟಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ಜೆಡಿಎಸ್ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಲೇವಡಿ ಮಾಡಿದರು.