ಬೆಂಗಳೂರು : ಏಪ್ರಿಲ್ 15, ಮೇ 4, 12 ಮತ್ತು ಮೇ 18ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳು ನಡೆಯಲಿವೆ. ಹಾಗಾಗಿ ಪ್ರಯಾಣಿಕರ ಅನುಕೂಲಕ್ಕೆ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲು ಬಿಎಂಟಿಸಿ ನಿರ್ಧರಿಸಿದೆ.
ಕ್ರಿಕೆಟ್ ಪ್ರೇಮಿಗಳಿಗೆ ಈ ಮೂಲಕ ಬಿಎಂಟಿಸಿ ಸಿಹಿ ಸುದ್ದಿ ನೀಡಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಎಚ್ಎಎಲ್ ರಸ್ತೆ ಮೂಲಕ ಕಾಡುಗೋಡಿ ಬಸ್ ನಿಲ್ದಾಣಕ್ಕೆ, ಹೂಡಿ ರಸ್ತೆ ಮೂಲಕ ಕಾಡುಗೋಡಿ ಬಸ್ ನಿಲ್ದಾಣಕ್ಕೆ, ಹೊಸೂರು ರಸ್ತೆ ಮೂಲಕ ಎಲೆಕ್ಟ್ರಾನಿಕ್ ಸಿಟಿಗೆ, ನಾಗವಾರ–ಟ್ಯಾನರಿ ರಸ್ತೆ ಮೂಲಕ ಆರ್.ಕೆ. ಹೆಗಡೆ ನಗರಕ್ಕೆ ಸಂಚರಿಸಲಿವೆ.
ಮಾಗಡಿ ರಸ್ತೆ ಮೂಲಕ ಜನಪ್ರಿಯ ಟೌನ್ಶಿಪ್ಗೆ, ಎಂಟಿಸಿಟಿ– ನಾಯಂಡಹಳ್ಳಿ ಮೂಲಕ ಕೆಂಗೇರಿ ಕೆಎಚ್ಬಿ ಕ್ವಾರ್ಟರ್ಸ್ಗೆ, ಹೆಣ್ಣೂರು ರಸ್ತೆ ಮೂಲಕ ಬಾಗಲೂರಿಗೆ ಹೆಚ್ಚುವರಿ ಬಸ್ಗಳು ಸಂಚರಿಸಲಿವೆ. ಸರ್ಜಾಪುರ, ಬನ್ನೇರುಘಟ್ಟ ಮೃಗಾಲಯ, ನೆಲಮಂಗಲ, ಯಲಹಂಕ 5ನೇ ಹಂತ, ಹೊಸಕೋಟೆಗಳಿಗೂ ಹೆಚ್ಚುವರಿ ಬಸ್ ವ್ಯವಸ್ಥೆ ಇರಲಿದೆ ಎಂದು ಬಿಎಂಟಿಸಿ ಸಾರ್ವಜನಿಕ ಅಧಿಕಾರಿ ತಿಳಿಸಿದ್ದಾರೆ.