ಆಂಧ್ರಪ್ರದೇಶ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿ ಎಲ್ಲಾ ಪಕ್ಷಗಳು ಚುನಾವಣಾ ಪ್ರಚಾರ ಕೈಗೊಂಡಿದ್ದು ಇದೀಗ ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಚುನಾವಣಾ ಪ್ರಚಾರ ಕೈಗೊಂಡಿದ್ದರು. ಈ ವೇಳೆ ಕಿಡಿಗೇಡಿಗಳು ಅವರ ಮೇಲೆ ಕಲ್ಲೇಸೆದಿರುವ ಘಟನೆ ನಡೆದಿದೆ.ಆಂಧ್ರಪ್ರದೇಶದ ವಿಜಯವಾಡದ ಸಿಂಗ್ ನಗರದಲ್ಲಿ ಈ ಘಟನೆ ನಡೆದಿದೆ.
ಚುನಾವಣಾ ಪ್ರಚಾರದ ವೇಳೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಮೇಲೆ ಕಲ್ಲೇಸಿದ್ದಾರೆ. ಕಿಡಿಗೇಡಿಗಳು ಕಲ್ಲೇಸತದಿಂದ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಗೆ ಕಣ್ಣಿಗೆ ಗಾಯವಾಗಿದೆ. ತಕ್ಷಣ ಅವರಿಗೆ ಪ್ರಚಾರದ ವಾಹನದಲ್ಲೇ ಜಗನ್ ಮೋಹನ್ ರೆಡ್ಡಿಗೆ ಪ್ರಾರ್ಥಮಿಕ ಚಿಕಿತ್ಸೆ ನೀಡಲಾಯಿತು. ಪ್ರಾಥಮಿಕ ಚಿಕಿತ್ಸೆ ಬಳಿಕ ಸಿಎಂ ಜಗನ್ಮೋಹನ್ ರೆಡ್ಡಿ ಪ್ರಚಾರವನ್ನು ಮುಂದುವರಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.