ಶಿವಮೊಗ್ಗ : ಪ್ರಧಾನಿ ನರೇಂದ್ರ, ಅಮಿತ್ ಶಾ ಸೇರಿ ಬೇರೆ ಯಾರೇ ಹೇಳಿದ್ರೂ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರೇ, ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ, ನರೇಂದ್ರ ಮೋದಿ, ಅಮಿತ್ ಶಾ ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯ @BJP4Karnataka ಮಾನ್ಯ ಅಧ್ಯಕ್ಷ @BYVijayendra ಅವರೆ, ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ, @narendramodi @AmitShah ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ.
— K S Eshwarappa (Modi Ka Parivar) (@ikseshwarappa) April 14, 2024
ತಮ್ಮ ಪುತ್ರನಿಗೆ ಹಾವೇರಿ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡು ಬಂಡಾಯವೆದ್ದಿರುವ ಕೆ.ಎಸ್ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಈಗಾಗಲೇ ನಾಮಪತ್ರ ಸಲ್ಲಿಸಿರುವ ಅವರು ಪ್ರಚಾರ ಕೂಡ ಆರಂಭಿಸಿದ್ದಾರೆ,