ಬೆಂಗಳೂರು : ಅಕ್ಕನ ಕ್ಷೇತ್ರದಲ್ಲಿಯೇ ಬಿಜೆಪಿ ಸಮಾವೇಶದಲ್ಲಿ ಅಪಾರ ಸಂಖ್ಯೆಯ ಮಹಿಳೆಯರು ಸೇರಿದ್ದಾರೆ. ಅಕ್ಕ ನಿದ್ದೆಗೆಡುವುದು ಗ್ಯಾರಂಟಿ. ಅವರಿಂದು ನಿದ್ದೆ ಮಾತ್ರೆ ತೆಗೆದುಕೊಳ್ಳಬೇಕು ಇಲ್ಲವೇ ಒಂದು ಎಕ್ಸ್‌ಟ್ರಾ ಪೆಗ್ ಹೆಚ್ಚುವರಿ ಕುಡಿಯಬೇಕು ಎಂದು ಸಂಜಯ ಪಾಟೀಲ್ ಹೇಳಿಕೆಗೆ ಸಂಬಂಧಿಸಿದಂತೆ ಇದೀಗ ರಾಜ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ಶನಿವಾರ ಹಿಂಡಲಗಾದಲ್ಲಿ ನಡೆದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ್, ಅಕ್ಕನ ಕ್ಷೇತ್ರದಲ್ಲಿಯೇ ಬಿಜೆಪಿ ಸಮಾವೇಶದಲ್ಲಿ ಅಪಾರ ಸಂಖ್ಯೆಯ ಮಹಿಳೆಯರು ಸೇರಿದ್ದಾರೆ. ಅಕ್ಕ ನಿದ್ದೆಗೆಡುವುದು ಗ್ಯಾರಂಟಿ. ಅವರಿಂದು ನಿದ್ದೆ ಮಾತ್ರೆ ತೆಗೆದುಕೊಳ್ಳಬೇಕು ಇಲ್ಲವೇ ಒಂದು ಎಕ್ಸ್‌ಟ್ರಾ ಪೆಗ್ ಹೆಚ್ಚುವರಿ ಕುಡಿಯಬೇಕು ಎಂದು ಹೇಳಿದ್ದರು.
ಈ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯರ ಕುರಿತಂತೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಇದೀಗ ರಾಜ್ಯ ಮಹಿಳಾ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಸಂಜಯ್ ಪಾಟೀಲ್ ಗೆ ಮಹಿಳಾ ಆಯೋಗದಿಂದ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.