ಮೈಸೂರು : ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ ತಕ್ಷಣ ಎಲ್ಲಾ 25 ಗ್ಯಾರಂಟಿಗಳು ಜಾರಿ ಆಗುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಎನ್.ಆರ್.ಮೊಹಲ್ಲಾದಲ್ಲಿ ನಡೆದ ‘ಪ್ರಜಾಧ್ವನಿ-2’ ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಜತೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು 25 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ ತಕ್ಷಣ ಎಲ್ಲಾ 25 ಗ್ಯಾರಂಟಿಗಳು ಜಾರಿ ಆಗುತ್ತವೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಮಹಿಳೆಯರು ಹಾದಿ ತಪ್ಪಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿಯವರು ನೀಡಿದ ಹೇಳಿಕೆ ಇಡೀ ಮಹಿಳಾ ಸಮುದಾಯದ ಸ್ವಾಭಿಮಾನವನ್ನು ಕೆಣಕಿದೆ. ಮಹಿಳೆಯರಿಗೆ ಈ ಮಟ್ಟದ ಅವಮಾನ ಖಂಡನೀಯ ಎಂದರು.
ಪ್ರಧಾನಿ ಮೋದಿ ಅವರೇ ಚುನಾವಣೆ ಟೈಮಲ್ಲಿ ಬಿಟ್ಟರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ಲವೇ ನಿಮಗೆ?
ರಾಜ್ಯಕ್ಕೆ ಪ್ರವಾಹ ಬಂದಾಗಲೂ ಬರಲಿಲ್ಲ, ಬರಗಾಲ ಬಂದಾಗಲೂ ಬರಲಿಲ್ಲ. ಚುನಾವಣೆ ಬಂತು ಓಡಿ ಬಂದ್ರಿ. ಸುಳ್ಳು ಹೇಳಿ ಹೋದ್ರಿ. ಯಾವ ಮುಖ ಹೊತ್ತುಕೊಂಡು ರಾಜ್ಯಕ್ಕೆ ಬಂದ್ರಿ?
ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ನಿಲ್ಲಿಸಿದ್ದು ಕೇಂದ್ರ ಬಿಜೆಪಿ ಸರ್ಕಾರ. ಈ ಸತ್ಯ ಪ್ರತೀ ವಿದ್ಯಾರ್ಥಿಗೆ ಗೊತ್ತು. ನೀವು ನಿಲ್ಲಿಸಿದ ಸ್ಕಾಲರ್ ಶಿಪ್ ಅನ್ನು ನಾವು ಕೊಡುತ್ತಿದ್ದೇವೆ. ಹೀಗಿದ್ದೂ ನಾವೇ ಸ್ಕಾಲರ್ ಶಿಪ್ ನಿಲ್ಲಿಸಿದ್ದೇವೆ ಎಂದು ಯಾವ ಬಾಯಲ್ಲಿ ಸುಳ್ಳು ಹೇಳ್ತೀರಿ? ಎಂದು ವಾಗ್ದಾಳಿ ನಡೆಸಿದ್ದಾರೆ.