ಚಿತ್ರದುರ್ಗ: ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬಿರು ಬಿಸಿಲ ನಡುವೆಯೂ ಲೋಕಸಭಾ ಚುನಾವಣೆಯ ಪ್ರಚಾರದ ಕಾವೇರಿದೆ. ಚಿತ್ರದುರ್ಗದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಂತ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ.
ಎದೆ ನೋವಿನಿಂದ ಬಳಲುತ್ತಿದ್ದಂತ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.