ಚಿತ್ರದುರ್ಗ: ಚುನಾವಣಾ ಪ್ರಚಾರದ ವೇಳೆಯಲ್ಲಿ ಎದೆ ನೋವು ಕಾಣಿಸಿಕೊಂಡ ಕಾರಣ, ಸಚಿವ ಜಮೀರ್ ಅಹ್ಮದ್ ಖಾನ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇಂತಹ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಕಾರಣ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರೋದಾಗಿ ತಿಳಿದು ಬಂದಿದೆ.
ಚಿತ್ರದುರ್ಗದಲ್ಲಿ ಲೋಕಸಭಾ ಚುನಾವಣೆ ಕಾರಣ ಕಾಂಗ್ರೆಸ್ ಅಭ್ಯರ್ಥಿ ಎಂ.ಚಂದ್ರಪ್ಪ ಪರವಾಗಿ ಬಿರು ಬಿಸಿಲಿನ ನಡುವೆಯೂ ಸಚಿವ ಜಮೀರ್ ಅಹ್ಮದ್ ಖಾನ್ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆಯಲ್ಲಿ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು.
ಈ ಹಿನ್ನಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅವರನ್ನು ವೈದ್ಯರು ತಪಾಸಣೆ ನಡೆಸಿದರು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಕಾರಣ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿರೋದಾಗಿ ತಿಳಿದು ಬಂದಿದೆ.
BREAKING : ನ್ಯಾಯಾಂಗ ದುರ್ಬಲಗೊಳಿಸುವ ಪ್ರಯತ್ನ ಖಂಡಿಸಿ 21 ನಿವೃತ್ತ ನ್ಯಾಯಾಧೀಶರಿಂದ ‘CJI’ಗೆ ಪತ್ರ