ಬೆಂಗಳೂರು: ಚುನಾವಣಾ ಪ್ರಚಾರದ ವೇಳೆ ನಾವು ನುಡಿದಂತೆ ನಡೆದಿದ್ದೇವೆ, ಗ್ಯಾರಂಟಿ ಈಡೇರಿಸಿದ್ದೇವೆ ಎಂಬುದಾಗಿ ಕರಪತ್ರ ಹಂಚಿದ ಆರೋಪದ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಚುನಾವಣಾ ಪ್ರಚಾರದ ವೇಳೆಯಲ್ಲಿ ನಾವು ನುಡಿದಂತೆ ನಡೆದಿದ್ದೇವೆ. ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂಬುದಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೌಮ್ಯಾರೆಡ್ಡಿ ಪರ ಕಾರ್ಯಕರ್ತರು ಕರಪತ್ರವನ್ನು ಹಂಚಿದ್ದರು.
ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಕರಪತ್ರ ಹಂಚಿದ ಕಾರಣ, ಚುನಾವಣಾಧಿಕಾರಿ ಸಂತೋಷ್ ಎಂಬುವರು ಕಲಾಸಿಪಾಳ್ಯ ಪೊಲೀಸ್ ಠಾಣೆಗೆ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ.
BREAKING : ನ್ಯಾಯಾಂಗ ದುರ್ಬಲಗೊಳಿಸುವ ಪ್ರಯತ್ನ ಖಂಡಿಸಿ 21 ನಿವೃತ್ತ ನ್ಯಾಯಾಧೀಶರಿಂದ ‘CJI’ಗೆ ಪತ್ರ
ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಕುಸಿತ ; 14,000ಕ್ಕೂ ಹೆಚ್ಚು ಉದ್ಯೋಗಿಗಳ ವಜಾಕ್ಕೆ ಮುಂದಾದ ‘ಟೆಸ್ಲಾ’