ಬೆಂಗಳೂರು: ಶಾಲಾ ಶಿಕ್ಷಕರಾಗಬೇಕು ಅಂದ್ರೆ TET ಪರೀಕ್ಷೆ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸೋದಕ್ಕೆ ಅನೇಕ ಅಭ್ಯರ್ಥಿಗಳು ಕಾಯುತ್ತಿದ್ದಾರೆ. ಇಂತಹ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ-ಸೆಟ್ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಕುರಿತಂತೆ ಇಂದು ಕೇಂದ್ರೀಕೃತ ದಾಖಲಾತಿ ಘಟಕದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. 2024ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ( KARTET-2024)ಯು ದಿನಾಂಕ 30-06-2024ರಂದು ರಾಜ್ಯಾಧ್ಯಂತ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ವೆಬ್ ಸೈಟ್ https://schooleducation.karnataka.gov.in ಜಾಲತಾಣಕ್ಕೆ ಭೇಟಿ ನೀಡಿ, ಅರ್ಜಿಯನ್ನು ಸಲ್ಲಿಸಬಹುದು. ಇದೇ ವೆಬ್ ಲಿಂಕ್ ನಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-05-2024 ಆಗಿರುತ್ತದೆ ಎಂದು ಹೇಳಿದ್ದಾರೆ.
ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಕುಸಿತ ; 14,000ಕ್ಕೂ ಹೆಚ್ಚು ಉದ್ಯೋಗಿಗಳ ವಜಾಕ್ಕೆ ಮುಂದಾದ ‘ಟೆಸ್ಲಾ’
BREAKING: ‘ಸಂಸದ ತೇಜಸ್ವಿ ಸೂರ್ಯ’ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ‘ಚುನಾವಣಾ ಆಯೋಗ’ಕ್ಕೆ ದೂರು