ನವದೆಹಲಿ: ಒಡಿಶಾದ ಜಜ್ಪುರ್ ಜಿಲ್ಲೆಯಲ್ಲಿ ಸೋಮವಾರ ಸಂಜೆ ಕೋಲ್ಕತ್ತಾಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಬಿದ್ದ ಪರಿಣಾಮ ಮಹಿಳೆ ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುರಿಯಿಂದ ಕೋಲ್ಕತ್ತಾಗೆ 40 ಪ್ರಯಾಣಿಕರನ್ನು ಹೊತ್ತ ಬಸ್ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ -16 ರ ಬಾರಾಬತಿ ಸೇತುವೆಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಕೆಳಗೆ ಉರುಳಿ ಬಿದ್ದು ಈ ಭೀಕರ ದುರಂತ ಸಂಭವಿಸಿದೆ.
ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.