ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹುಬ್ಬಳ್ಳಿ ಸಮೀಪ ಇಂದು ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಆಂಧ್ರ ಮೂಲದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತವಾದ ಕಾರಿನಲ್ಲಿ ಮದ್ಯದ ಬಾಟಲ್ ಗಳು ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.