ಕೊಪ್ಪಳ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗ ಕಾಂಗ್ರೆಸ್ ಕೊಪ್ಪಳ ಹಾಲಿ ಸಂಸದರಾಗಿರುವ ಕರಡಿ ಸಂಗಣ್ಣ ಅವರಿಗೆ ಗಾಳ ಹಾಕಿದ್ದು ಈ ಕುರಿತಂತೆ ಪ್ರತಿಕ್ರಿಯೆ ನೀಡಿದ ಕರಡಿ ಸಂಗಣ್ಣ ಅವರು ನಾಳೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರನ್ನು ಭೇಟಿಯಾಗಿ ನಂತರ ನನ್ನ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದು ತಿಳಿಸಿದರು.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸೇರ್ಪಡೆ ಕುರಿತಂತೆ ನಿಖರವಾದ ಮಾಹಿತಿ ಬಂದಿಲ್ಲ ಎಂದು ಕೊಪ್ಪಳದಲ್ಲಿ ಬಿಜೆಪಿ ಸಂಸದ ಕರಡಿ ಶಂಕರಣ್ಣ ಪ್ರತಿಕ್ರಿಯೆ ನೀಡಿದ್ದು, ಇಂದು ಬೆಂಗಳೂರಿಗೆ ಹೋಗುತ್ತಿದ್ದೇನೆ ನಾಳೆ ಮುಖ್ಯಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡುತ್ತೇನೆ. ಸಿಎಂ ಡಿಸಿಎಂ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಕೊಪ್ಪಳದಲ್ಲಿ ಬಿಜೆಪಿ ಸಂಸದ ಕರಡಿ ಸಂಗಣ್ಣ ಹೇಳಿಕೆ ನೀಡಿದರು.
ಈಗಾಗಲೇ ಅಥಣಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಲಕ್ಷ್ಮಣ ಸವದಿ ಅವರು ಸಂಸದ ಕರಡಿ ಸಂಗಣ್ಣ ಅವರನ್ನು ಭೇಟಿಯಾಗಿದ್ದು, ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಕುರಿತಂತೆ ಬಹುತೇಕ ಚರ್ಚಿಸಲಾಗಿದೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ ಹೀಗಾಗಿ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮುಂದಿನ ನಿರ್ಧಾರ ತಿಳಿಸಿದ್ದೇನೆ ಎಂದು ತಿಳಿಸಿದರು.