ಮಂಡ್ಯ : ರಾಜ್ಯದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಲೋಕಸಭಾ ಕ್ಷೇತ್ರದ ಪ್ರಮುಖ ಅಖಾಡವಾಗಿರುವ ಮಂಡ್ಯದಲ್ಲಿ ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮತ ಭೇಟಿ ನಡೆಸಲಿದ್ದಾರೆ ಈ ಕುರಿತಂತೆ ಈಗಾಗಲೇ ಮಂಡ್ಯದಲ್ಲಿ ಕಾಂಗ್ರೆಸ್ ಸಮಾವೇಶ ಕುರಿತಂತೆ ಭರದ ಸಿದ್ಧತೆ ನಡೆಸಲಾಗುತ್ತಿದೆ.
ನಾಳೆ ಮಂಡ್ಯದಲ್ಲಿ ರಾಹುಲ್ ಗಾಂಧಿಯಿಂದ ಮತ ಬೇಟೆ ನಡೆಸಲಿದ್ದು, ನಾಳೆ ಮಂಡ್ಯದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಯೋಜನೆ ಮಾಡಲಾಗಿದೆ. ಮಂಡ್ಯದ ವಿವಿ ಮೈದಾನದಲ್ಲಿ ಬೃಹತ್ ವೇದಿಕೆ ತಯಾರಿ ಆಗುತ್ತಿದ್ದು ಜರ್ಮನ್ ಟೆಂಟ್ ಮೂಲಕ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ.
ಮಂಡ್ಯ ಕಾಂಗ್ರೆಸ್ ಶಾಸಕರಿಂದ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಶಾಸಕ ಗಣಿಗ ರವಿಕುಮಾರ್ ಇಂದ ಇದೀಗ ವೇದಿಕೆ ಪರಿಶೀಲನೆ ನಡೆಸಲಾಗುತ್ತಿದೆ. ರಾಹುಲ್ ಗಾಂಧಿಯವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಾಥ್ ನೀಡಲಿದ್ದಾರೆ.ನಾಳೆ ಮಧ್ಯಾಹ್ನ 1.30 ಕ್ಕೆ ಮಂಡ್ಯಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ಕೈ ಅಭ್ಯರ್ಥಿ ಸ್ಟಾರ್ ಚಂದ್ರ ರಾಹುಲ್ ಗಾಂಧಿ ಮತ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.