ಬೆಂಗಳೂರು : ಹಿರಿಯ ನಟ ನಿರ್ಮಾಪಕ ನಿರ್ದೇಶಕ ದ್ವಾರಕೀಶ್ (81) ಅವರು ಇಂದು ಅದ್ಯಾಗಾತದಿಂದ ಸಾವನ್ನಪ್ಪಿದ್ದು ನಾಳೆ ಬೆಳಿಗ್ಗೆ 11:30ಕ್ಕೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.
ಹಿರಿಯ ನಟ ನಿರ್ಮಾಪಕ ನಿರ್ದೇಶಕ ದ್ವಾರಕೀಶ್ ನಿಧನರಾಗಿರುವ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 7:30ರ ಬಳಿಕ ರವೀಂದ್ರ ಕಲಾಕ್ಷೇತ್ರಕ್ಕೆ ಅವರ ಪಾರ್ಥಿವ ಶರೀರವನ್ನು ಶಿಫ್ಟ್ ಮಾಡಲಾಗುತ್ತಿದ್ದು, ಇಂದು ಅವರ ನಿವಾಸದಲ್ಲಿಯೇ ಪಾರ್ಥಿವ ಶರೀರ ಇರಲಿದೆ.
ಹಾಗಾಗಿ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ 11:30 ನಂತರ ದ್ವಾರಕೀಶ್ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ.