ಕಲಬುರಗಿ : ಕಲ್ಬುರ್ಗಿ ಜಿಲ್ಲೆಯನ್ನು ಅಗ್ರಿಕಲ್ಚರ್ ಹಬ್ ಮಾಡಲು ನಿರ್ಧರಿಸಿದ್ದು ಹಾಗಾಗಿ ಮುಂದಿನ ಆರು ತಿಂಗಳಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಅಗ್ರಿಕಲ್ಚರ್ ಹಬ್ ಮಾಡಲು 39 ಕೋಟಿ ವೆಚ್ಚವನ್ನು ಭರಿಸಲಾಗುತ್ತದೆ ಎಂದು ಕಲ್ಬುರ್ಗಿಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.
ಜಿಲ್ಲೆಯ ರೈತರು ಬೆಳೆಗಳ ಸಂರಕ್ಷಣೆ, ಪೋಷಣೆ ಹಾಗೂ ಉತ್ತಮ ಮಾರುಕಟ್ಟೆ ಕಲ್ಪಿಸುವ ಉದ್ದೇಶ ಹೊಂದಿದ್ದು ಈ ನಿಟ್ಟಿನಲ್ಲಿ ಕೋಲ್ಡ್ ಸ್ಟೋರೇಜ್, ಕಸ್ಟಮ್ ಹೈರ್ ಸೆಂಟರ್, ಆಧುನಿಕ ಉಪಕರಣಗಳ ವಿತರಣೆ ಕೇಂದ್ರ, ವ್ಯಾಲ್ಯು ಎಡಿಷನ್ ಸೆಂಟರ್ ಸೇರಿದಂತೆ ಹಲವಾರು ಯೋಜನೆಗಳನ್ನು ಮುಂದಿನ ಆರು ತಿಂಗಳಲ್ಲಿ ಜಾರಿಗೆ ತರುವ ಮೂಲಕ ಅಗ್ರಿಕಲ್ಚರ್ ಹಬ್ ಮಾಡಲಾಗುವುದು. ಇದಕ್ಕಾಗಿ ₹39 ಕೋಟಿ ವೆಚ್ಚಮಾಡಲಾಗುವುದು ಎಂದರು.
ನೆಹರು ಗಂಜನ್ನು ನಗರದ ಹೊರ ವಲಯದಲ್ಲಿ ಶಿಫ್ಟ್ ಮಾಡುವ ಪ್ರಸ್ತಾವನೆ ಕುರಿತು ಹೇಳಿದ ಸಚಿವರು ಚುನಾವಣೆ ಮುಗಿದ ನಂತರ ಈ ವಿಷಯಕ್ಕೆ ಕುರಿತಂತೆ ಸೂಕ್ತ ಕ್ರಮಕೈಗೊಳ್ಳಲಾಗುವುದು. ಇದರ ಜೊತೆಗೆ ಒಂದು ವೇರ್ ಹೌಸ್, ಕೋಲ್ಡ್ ಸ್ಟೋರೇಜ್, ಕುಡಿಯುವ ನೀರು ಹಾಗೂ ಶೌಚಾಲಯ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದರು.
ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮಾತನಾಡಿ, ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು. ಈಗಾಗಲೇ ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಇದ್ದಾರೆ, ಜಿಲ್ಲೆಯಲ್ಲಿ ಮೂವರು ಸಚಿವರು ಇದ್ದಾರೆ. ನನಗೆ ಆಶೀರ್ವಾದ ಮಾಡಿದರೆ ನಾನೂ ಕೂಡಾ ಅವರೊಂದಿಗೆ ಕೈ ಜೋಡಿಸಿ ಅಭಿವೃದ್ಧಿ ಪಡಿಸುತ್ತೇನೆ.ಇದು ರಾಧಾಕೃಷ್ಣ ಹಾಗೂ ಜಾಧವ್ ನಡುವಿನ ಚುನಾವಣೆಯಲ್ಲ ಇದು ಕಲಬುರಗಿ ಅಭಿವೃದ್ದಿ, ಜಿಲ್ಲೆಯ ರೈತರ ಹಾಗೂ ವರ್ತಕರ ಹಿತ ಕಾಪಾಡುವ ಚುನಾವಣೆಯಾಗಿದೆ. ಹಾಗಾಗಿ, ನೀವೆಲ್ಲ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರಿಗೆ ಮತ ಹಾಕಬೇಕು ಎಂದು ಮನವಿ ಮಾಡಿದರು.