ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ ‘ಪ್ರಚಂಡ ಕುಳ್ಳ’ ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು ಎಂದಿದ್ದಾರೆ.
ಡಾ. ರಾಜ್‌ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ದ್ವಾರಕೀಶ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ, ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ 'ಪ್ರಚಂಡ ಕುಳ್ಳ' ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು.
ಡಾ. ರಾಜ್‌ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು… pic.twitter.com/ARyuMzFMC0— Siddaramaiah (@siddaramaiah) April 16, 2024
BREAKING : ಪಾಟ್ನಾದಲ್ಲಿ ಭೀಕರ ರಸ್ತೆ ಅಪಘಾತ : ಜೆಸಿಬಿಗೆ ಆಟೋ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವು
BREAKING: ದೆಹಲಿಯ ಗೃಹ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ | Fire breaks