ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ ( Union Public Service Commission -UPSC)2023 ರ ನಾಗರಿಕ ಸೇವೆಗಳ ಪರೀಕ್ಷೆಯ ( Civil Services Exam 2023 ) ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದ್ದು, ಆದಿತ್ಯ ಶ್ರೀವಾಸ್ತವ ಅಗ್ರ ರ್ಯಾಂಕ್ ಗಳಿಸಿದ್ದಾರೆ.
ಅನಿಮೇಶ್ ಪ್ರಧಾನ್ ಮತ್ತು ಡೊನೂರು ಅನನ್ಯಾ ರೆಡ್ಡಿ ಕ್ರಮವಾಗಿ ಎರಡು ಮತ್ತು ಮೂರನೇ ರ್ಯಾಂಕ್ ಪಡೆದಿದ್ದಾರೆ.
ಒಟ್ಟು 1,016 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ವಿವಿಧ ಕೇಂದ್ರ ಸರ್ಕಾರಿ ಸೇವೆಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಯುಪಿಎಸ್ಸಿ ತಿಳಿಸಿದೆ.
ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ವಿದೇಶಾಂಗ ಸೇವೆ (ಐಎಫ್ಎಸ್) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಗಳನ್ನು ಆಯ್ಕೆ ಮಾಡಲು ಯುಪಿಎಸ್ಸಿ ವಾರ್ಷಿಕವಾಗಿ ಪ್ರಾಥಮಿಕ, ಮುಖ್ಯ ಮತ್ತು ಸಂದರ್ಶನ ಎಂಬ ಮೂರು ಹಂತಗಳಲ್ಲಿ ನಾಗರಿಕ ಸೇವೆಗಳ ಪರೀಕ್ಷೆಯನ್ನು ನಡೆಸುತ್ತದೆ.
ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ
BREAKING : ಪಾಟ್ನಾದಲ್ಲಿ ಭೀಕರ ರಸ್ತೆ ಅಪಘಾತ : ಜೆಸಿಬಿಗೆ ಆಟೋ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವು