ಬೆಂಗಳೂರು: ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನದ ಕಾರಣ ಬೆಂಗಳೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೀಗಾಗಿ ನಿಷೇಧಾಜ್ಞೆ ಹಿನ್ನಲೆಯಲ್ಲಿ ಮದ್ಯ ಮಾರಾಟಕ್ಕೂ ನಿರ್ಬಂಧ ವಿಧಿಸಲಾಗಿದೆ. ಸೋ ಬೆಂಗಳೂರಲ್ಲಿ ಎರಡು ದಿನ ಎಣ್ಣೆ ಕೂಡ ಸಿಗೋದಿಲ್ಲ.
ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದು, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್.24ರ ಸಂಜೆ 6 ಗಂಟೆಯಿಂದ ಏಪ್ರಿಲ್.26ರ ರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ನಿಷೇಧಾಜ್ಞೆಯ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿ, ಬೆಂಬಲಿಗರು ಸೇರಿ 2ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಮತಗಟ್ಟೆ ವ್ಯಾಪ್ತಿಯ 100 ಮೀಟರ್ ಒಳಗೆ ಪ್ರಚಾರ ನಿಷೇಧಿಸಲಾಗಿದೆ. ಪೋಸ್ಟರ್, ಬ್ಯಾನರ್ ಗಳ ಬಳಕೆಗೆ ನಿರ್ಬಂಧವನ್ನು ವಿಧಿಸಲಾಗಿದೆ.
ಇನ್ನೂ ಪ್ರಚೋದನಕಾರಿ ಭಾಷಣ, ರಾಜಕೀಯ ಸಂಬಂಧಿಸಿದಂತ ಘೋಷಣೆ, ಉದ್ರೇಕಕಾರಿ ಹಾಡು, ಕೂಗಾಟ, ಧ್ವನಿ ವರ್ಧಕ ಬಳಕೆಗೂ ಲೋಕಸಭಾ ಚುನಾವಣೆಯ ಮತದಾನದ ಹಿನ್ನಲೆಯಲ್ಲಿ ನಿಷೇಧ ಹೇರಲಾಗಿದೆ.
ಮತಗಟ್ಟೆಯ ಸುತ್ತಾಮುತ್ತ 100 ಮೀಟರ್ ಅಂತರದಲ್ಲಿ ಮೊಬೈಲ್ ನಿಷೇಧಿಸಲಾಗಿದೆ. ಗೌಪ್ಯತೆಗೆ ಧಕ್ಕೆ ಹಿನ್ನಲೆಯಲ್ಲಿ ಅಭ್ಯರ್ಥಿಗಳ ಭಾವಚಿತ್ರ ಪ್ರದರ್ಶನಕ್ಕೂ ನಿರ್ಬಂಧ ವಿಧಿಸಲಾಗಿದೆ. ಒಟ್ಟಾರೆಯಾಗಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಏಪ್ರಿಲ್.24ರ ಸಂಜೆ 6 ಗಂಟೆಯಿಂದ ಏಪ್ರಿಲ್.26ರ ರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.
ನಕಲಿ ರಾಜಕೀಯ ಜಾಹೀರಾತಿನ ವಿರುದ್ಧ ನಟ ‘ಅಮೀರ್ ಖಾನ್’ ದೂರು, ‘FIR’ ದಾಖಲು