ಬೆಂಗಳೂರು: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ಸಂಸದ ಸ್ಥಾನಕ್ಕೆ ಕರಡಿ ಸಂಗಣ್ಣ ಅವರು ರಾಜೀನಾಮೆ ನೀಡಿದ್ದಾರೆ. ಚುನಾವಣೆ ಹೊತ್ತಿನಲ್ಲೇ ಬಿಜೆಪಿಗೆ ಬಿಗ್ ಶಾಕ್ ಎನ್ನುವಂತೆ ಗುಡ್ ಬೈ ಹೇಳಿರುವಂತ ಅವರು, ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ.
ನಾಳೆ ಸಂಸದ ಕರಡಿ ಸಂಗಣ್ಣ ಅವರು ಕೆಸಿಪಿಸಿ ಕಚೇರಿಯಲ್ಲಿ ಬೆಳಿಗ್ಗೆ 10.30ಕ್ಕೆ ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿ, ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ.
ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ಸಂಸದ ಸ್ಥಾನಕ್ಕೆ ‘ಕರಡಿ ಸಂಗಣ್ಣ’ ರಾಜೀನಾಮೆ
ಬೆಂಗಳೂರು: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ಸಂಸದ ಸ್ಥಾನಕ್ಕೆ ಕರಡಿ ಸಂಗಣ್ಣ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿ, ಕರಡಿ ಸಂಗಣ್ಣ ರಾಜೀನಾಮೆ ನೀಡಿ ಹೊರ ನಡೆದಿದ್ದಾರೆ.
ಈಗಾಗಲೇ ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸಂಸದ ಕರಡಿ ಸಂಗಣ್ಣ ಸೇರಲಿದ್ದಾರೆ ಎನ್ನಲಾಗುತ್ತಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ಸಂಸದ ಸ್ಥಾನಕ್ಕೆ ಕರಡಿ ಸಂಗಣ್ಣ ರಾಜೀನಾಮೆ ನೀಡಿದ್ದಾರೆ.
ಇ-ಮೇಲ್ ಮೂಲಕ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಪತ್ರವನ್ನು ಕಳುಹಿಸಿದ್ದರೇ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ನಕಲಿ ರಾಜಕೀಯ ಜಾಹೀರಾತಿನ ವಿರುದ್ಧ ನಟ ‘ಅಮೀರ್ ಖಾನ್’ ದೂರು, ‘FIR’ ದಾಖಲು