ಬೆಂಗಳೂರು: ಮಂಗಳವಾರ ನಿಧರಾದ ಕನ್ನಡದ ಹಿರಿಯ ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಚಾಮರಾಜನಗರ ಪೇಟೆಯಲ್ಲಿಯರುವ ಹಿಂದೂ ರುದ್ರಭೂಮಿಯರಲ್ಲಿ ಬ್ರಾಹ್ಮಣ ಸಂಪ್ರದಾಯಂತೆ ನೇರವೇರಿತು. ಸಕಲ ಸರ್ಕಾರಿ ಗೌರವರೊಂದಿಗೆ ಮತ್ತು ಪೊಲೀಸ್ ಗೌರವದೊದಿಗೆ ಅವರ ಹಿರಿಯ ಮಗ ಚಿತೆಗೆ ಅಗ್ನಿಸ್ಪರ್ಶ ಮಾಡುವ ಮೂಲಕ ಅವರ ಅಂತ್ಯ ಕ್ರಿಯೆಯನ್ನು ನೇರವೇರಿಸಿದರು.
ಇನ್ನೂ ದ್ವಾರಕೀಶ್ ಅವರ ಅಂತ್ಯಕ್ರಿಯೆಗೂ ಮುನ್ನ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲಾಗಿತ್ತು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಿನಿಮಾ ಮಂದಿ ಅವರ ದರ್ಶನವನ್ನು ಪಡೆದುಕೊಂಡರು.
ದ್ವಾರಕೀಶ್ ಆಗಸ್ಟ್ 19, 1942ರಂದು ಹುಣಸೂರು ನಲ್ಲಿ ಶಾಮರಾವ್ ಮತ್ತು ಜಯಮ್ಮರವರಿಗೆ ಜನಿಸಿದರು. ಶಾರದಾ ವಿಲಾಸ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ ಅವರು ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಇಂಜಿನಿಯರಿAಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು. ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು.1963ರಲ್ಲಿ. ಅವರು ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು. ಕನ್ನಡದ ಪ್ರಮುಖ ನಟರಾದ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಜೋಡಿ ಎಂದು ಪ್ರಸಿದ್ಧವಾಗಿತ್ತು. 16 ಏಪ್ರಿಲ್ 2024ರಂದು ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು.