ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಕುಳ್ಳ ಎಂದೆ ಖ್ಯಾತಿ ಹೊಂದಿದ್ದ ನಟ ನಿರ್ಮಾಪಕ ಹಾಗೂ ನಿರ್ದೇಶಕರಾಗಿದ್ದ ದ್ವಾರಕೀಶ್ ಅವರ ಅಂತ್ಯಕ್ರಿಯೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಇರೋ ಹಿಂದೂ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯ ಸಂಸ್ಕಾರ ನೆರವೇರಿತು.
ರಾಜ್ಯ ಸರ್ಕಾರದ ಆದೇಶದಂತೆ ದ್ವಾರಕೀಶ್ ಅವರ ಅಂತ್ಯಕ್ರಿಯೆಯು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ದ್ವಾರಕೀಶ ಜೊತೆಗೆ ಹಿರಿಯ. ಮಗನಿಂದ ಅಗ್ನಿ ಸ್ಪರ್ಶ ನೆರವೇರಿತು.ಚಾಮರಾಜಪೇಟೆಯಲ್ಲಿ ದ್ವಾರಕೀಶ್ ಅಂತ್ಯಕ್ರಿಯೆ ನಡೆಯೋಕ್ಕೂ ಮುಂಚೆ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು. ಮೊದಲಿಗೆ ಪ್ರೇತತ್ಮ ಸಂಸ್ಕಾರ. ಕಿವಿಯಲ್ಲಿ ನಾರಾಯಣ ಸ್ಮರಣೆ, ಚಿತ ಅಗ್ನಿ ಹೋಮದ ನಂತರ ಚಿತಾ ಶುದ್ದಿ ಕಾರ್ಯ ನಡೆಯಲಿದೆ ಬಳಿಕ ದಹನ ಮಾಡಿ ಅಗ್ನಿ ದಿಗ್ಬಂಧನ ನೆರವೇರಲಿತು. ನಂತರ ಅವರ ಹಿರಿಯ ಮಗ ಅಗ್ನಿ ಸ್ಪರ್ಶ ಮಾಡಿ ನೆರವೇರಿಸಿದರು.
ನಿನ್ನೆ ದ್ವಾರಕೀಶ್ ಅವರಿಗೆ ಹೃದಯಾಘಾತ ಆಗಿತ್ತು. ಕಾಫಿ ಕುಡಿದು ಮಲಗಿದ ನಟ ಮತ್ತೆ ಏಳಲೇ ಇಲ್ಲ. ದ್ವಾರಕೀಶ್ ನಿಧನದ ಬಗ್ಗೆ ಅವರ ಮಗ ಗಿರಿ ದ್ವಾರಕೀಶ್ ಮಾಹಿತಿ ನೀಡಿದ್ದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ 11 ಗಂಟೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಚಿತ್ರರಂಗದ ಅನೇಕ ಕಲಾವಿದರು ಗಣ್ಯರು ಆಗಮಿಸಿ ಅವರ ಅಂತಿಮ ದರ್ಶನ ಪಡೆದುಕೊಂಡರು ಅಲ್ಲದೆ ಸಾರ್ವಜನಿಕರಿಗೆ ಕೂಡ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಚಿತ್ರರಂಗದ ಶಿವರಾಜ್ ಕುಮಾರ್, ರಮೇಶ್ ಅರವಿಂದ್, ರವಿಚಂದ್ರನ್, ಗಿರಿಜಾ ಲೋಕೇಶ್, ಭವ್ಯ, ಶ್ರುತಿ, ಯಶ್, ಧ್ರುವ ಸರ್ಜಾ, ರವಿಚಂದ್ರನ್ ಸಹೋದರ ಬಾಲಾಜಿ ಸೇರಿದಂತೆ ಚಿತ್ರರಂಗದ ಎಲ್ಲಾ ಹಿರಿಯ ಹಾಗೂ ಕಿರಿಯ ಕಲಾವಿದರು ಆಗಮಿಸಿ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು.
‘ವೀರ ಸಂಕಲ್ಪ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ
1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ನೂರಾರು ಸಿನಿಮಾಗಳಲ್ಲಿ ನಟಿಸಿದ್ರು. ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ತುಂಬಾ ಫೇಮಸ್ ಆಗಿತ್ತು. ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್ ವಿಷ್ಣು ಅಭಿನಯದ ಬಹುತೇಕ ಸಿನಿಮಾಗಳು ಸೂಪರ್ ಹಿಟ್ ಆಗಿದೆ.
1969ರಲ್ಲಿ ಡಾ.ರಾಜ್ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ನಿರ್ಮಾಪಕರಾದ್ರು. ಈ ಚಿತ್ರ ಬಾಕ್ಸಾಫೀಸ್ನಲ್ಲಿ ಸೂಪರ್ ಹಿಟ್ ಆಗಿತ್ತು. ಈ ಸಿನಿಮಾದ ಬಳಿಕ ಹಲವು ಸಿನಿಮಾಗಳನ್ನು ನಿರ್ಮಿಸಿ, ಅದರಲ್ಲಿ ಯಶಸ್ಸು ಗಳಿಸಿದರು. ದ್ವಾರಕೀಶ್ ಈವರೆಗೂ 40ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿದ್ದಾರೆ. ನಿರ್ಮಾಪಕರಾಗಿ ಹಲವು ಕಲಾವಿದರಿಗೆ ಅವಕಾಶ ನೀಡಿದ್ದಾರೆ.
1985ರಲ್ಲಿ ಸಿನಿಮಾ ನಿರ್ದೇಶನಕ್ಕಿಳಿದ ದ್ವಾರಕೀಶ್, ಮೊದಲ ಬಾರಿ ನೀ ಬರೆದ ಕಾದಂಬರಿ ಎಂಬ ಚಿತ್ರವನ್ನು ನಿರ್ದೇಶಿಸಿದ್ರು. ಈ ಸಿನಿಮಾ ಸಾಕಷ್ಟು ಯಶಸ್ಸು ಗಳಿಸಿತು. ನಂತರ ಡಾನ್ಸ್ ರಾಜ ಡಾನ್ಸ, ಶ್ರುತಿ, ಶ್ರುತಿ ಹಾಕಿದ ಹೆಜ್ಜೆ, ರಾಯರು ಬಂದರು ಮಾವನ ಮನೆಗೆ ಸೇರಿದಂತೆ 15ಕ್ಕೂ ಹೆಚ್ಚು ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.