ಮಂಡ್ಯ: ವಿಶೇಷ ವಿಮಾನದ ಮೂಲಕ ಮಂಡ್ಯಕ್ಕೆ ಲೋಕಸಭಾ ಚುನಾವಣಾ ಪ್ರಚಾರ ಕೈಗೊಳ್ಳೋದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಿದ್ದಾರೆ.
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು AICC ವರಿಷ್ಠ ರಾಹುಲ್ ಗಾಂಧಿ ಅವರನ್ನು HAL ಏರ್ ಪೋರ್ಟ್ ನಲ್ಲಿ ಸ್ವಾಗತಿಸಿ, ಬರಮಾಡಿಕೊಂಡರು. ಇಬ್ಬರೂ ಒಟ್ಟಿಗೇ ಚುನಾವಣಾ ಪ್ರಚಾರಕ್ಕಾಗಿ ಮಂಡ್ಯಕ್ಕೆ ಪ್ರಯಾಣ ಬೆಳೆಸಿದರು.
ವಿಶೇಷ ಹೆಲಿಕ್ಯಾಪ್ಟರ್ ನಲ್ಲಿ ಒಟ್ಟಿಗೆ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಯಾಣ ಬೆಳೆಸಿದರು. ಮಂಡ್ಯದ ಪಿಇಎಸ್ ಕಾಲೇಜು ಮೈದಾನಕ್ಕೆ ಇಳಿದಂತ ಅವರನ್ನು ಕಾಂಗ್ರೆಸ್ ನಾಯಕರು ಬರಮಾಡಿಕೊಂಡರು.
ಇಂದು ಮಂಡ್ಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ.
‘ಸ್ಯಾನಿಟರಿ ಪ್ಯಾಡ್’ ನಂತೆ ಚೀನಾದಲ್ಲಿ ರೈಲು ನಿಲ್ದಾಣ ನಿರ್ಮಾಣ! ಫೋಟೋ ವೈರಲ್
ಪಂಚಭೂತಗಳಲ್ಲಿ ‘ಲೀನವಾದ’ ದ್ವಾರಕೀಶ್, ಕನ್ನಡದ ಕುಳ್ಳ ಇನ್ನೂ ನೆನಪು ಮಾತ್ರ!