ಬೆಂಗಳೂರು: ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸರಣಿಯಾಗಿ ರಾಜ್ಯಕ್ಕೆ ಬರಲಿದ್ದು, ಈ ಮೂಲಕ ಮತ್ತೆ ರಾಜ್ಯದಲ್ಲಿ ತಮ್ಮ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಮಡಿಕೇರಿ, ಉಡುಪಿಯಲ್ಲಿ ಸಮಾವೇಶ, ಹಾಗೂ ಚಿಕ್ಕಬಳ್ಳಾಪುರದಲ್ಲಿ ಸಮಾವೇಶ, ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿರೋ ನರೇಂದ್ರ ಮೋದಿ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.