ಮಂಡ್ಯ: ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ಸಂಜೆ ಗ್ರಾಮಕ್ಕೆ ಐಸ್ ಕ್ರೀಂ ಮಾರಲು ಬಂದಿದ್ದ ವ್ಯಕ್ತಿಯಿಂದ ಐಸ್ ಕ್ರೀಂ ಖರೀದಿಸಿ ತಾಯಿ ಮತ್ತು ಮಕ್ಕಳು ತಿಂಧಿದ್ದರು ಎನ್ನಲಾಗಿದೆ.ೃ
ಮಕ್ಕಳ ಮೃತ ದೇಹ ಮಿಮ್ಸ್ ಆಸ್ಪತ್ರೆಗೆ ರವಾನೆ ತಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಎನ್ನಲಾಗಿದೆ. ಐಸ್ ಕ್ರೀಂ ಮಾರಲು ಬಂದಿದ್ದ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ ಮಾಡಲಾಗಿದೆ. ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.