ಬೆಂಗಳೂರು: ಬಿರು ಬಿಸಿಲಿನಿಂದ ತತ್ತರಿಸಿರೋ ಜನತೆಗೆ, ಬೆಳೆ ಒಳಗುತ್ತಿರೋ ಆತಂಕದಲ್ಲಿರೋ ರೈತರಿಗೆ ಸಂತಸದ ಸುದ್ದಿಯನ್ನು ಹವಾಮಾನ ಇಲಾಖೆ ನೀಡಿದೆ. ಅದೇ ಇಂದಿನಿಂದ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯು ರಾಜ್ಯಾಧ್ಯಂತ ಅಲ್ಲಲ್ಲಿ ಚದುರಿದಂತೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ.
ಏಪ್ರಿಲ್.18ರ ಇಂದಿನಿಂದ ಏಪ್ರಿಲ್.22ರವರೆಗೆ ಸಾಧಾರಣ ಮಳೆಯಾಗಲಿದೆ. ಏಪ್ರಿಲ್.21ರಂದು ಮಾತ್ರ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದೂ, ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ತಿಳಿಸಿದೆ.
ಇಂದು ಶಿವಮೊಗ್ಗ, ದಾವಣಗೆರೆ, ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗೋ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
BREAKING: ಇವಿಎಂ-ವಿವಿಪ್ಯಾಟ್ ಪರಿಶೀಲನೆ ಪ್ರಕ್ರಿಯೆ ಬಗ್ಗೆ ವಿವರಣೆ ನೀಡುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ
`ಕಾಂಗ್ರೆಸ್ ಗೆ ಮತ ಹಾಕಿ’ : ಮಂಡ್ಯದಲ್ಲಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಅಬ್ಬರದ ಪ್ರಚಾರ!