ಚಿಕ್ಕಬಳ್ಳಾಪುರ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ರಕ್ಷಾ ರಾಮಯ್ಯ ಪರವಾಗಿ ಚುನಾವಣೆ ಪ್ರಚಾರ ಮಾಡಿದರು ಈ ವೇಳೆ ಮಾತನಾಡಿದ ಅವರು ರಾಜ್ಯದ ಜನರಿಗೆ ಮೋದಿ ಅವರ ಮೇಲೆ ವಿಶ್ವಾಸವಿಲ್ಲ ರಾಜ್ಯದಲ್ಲಿ ಮೋದಿಯಲೇ ಯಾವುದು ಇಲ್ಲ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದ ಜನರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ರಾಜ್ಯದ ಜನರಿಗೆ ಕಾಂಗ್ರೆಸ್ ಮೇಲೆ ನಂಬಿಕೆ ಹೆಚ್ಚಾಗಿದೆ.ಈ ಬಾರಿ ಭರವಸೆ ಕೊಟ್ಟಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿದ್ದೇವೆ. ರಾಜ್ಯದ ಜನರು ಮತ್ತೊಮ್ಮೆ ನಮ್ಮ ಕೈಹಿಡಿಯುತ್ತಾರೆ ಎಂಬ ವಿಶ್ವಾಸವಿದೆ.ರಾಜ್ಯದಲ್ಲಿ ಮೋದಿ ಅಲೆ ಇಲ್ಲ ಅವರು ಮ್ಯಾಜಿಕ್ ಮಾಡಲು ಆಗಲ್ಲ. ರಾಜ್ಯದ ಜನರಿಗೆ ಪ್ರಧಾನಿ ಮೋದಿ ಅವರ ಮೇಲೆ ವಿಶ್ವಾಸವಿಲ್ಲ ಎಂದರು.
ಹೆಣ್ಣು ಮಕ್ಕಳ ಬಗ್ಗೆ ಅವರ ಭಾವನೆ ಏನಿದೆ ಅಂತ ತೋರಿಸುತ್ತದೆ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಅನ್ನೋದು ಕೆಟ್ಟ ಭಾಷೆ ಎಚ್ ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು ಒಕ್ಕಲಿಗರಿಗೆ ಬಿಜೆಪಿ ಮೋಸ ಮಾಡಿದೆ ಪ್ರತಾಪ್ ಸಿಂಹ ಸದಾನಂದ ಗೌಡಗೆ ಬಿಜೆಪಿ ಮೋಸ ಮಾಡಿದೆ. ಹಿಂದೆ ಮೋದಿಯವರನ್ನು ಎಚ್ ಡಿ ದೇವೇಗೌಡ ಬೈತಿದ್ರು ಈಗ ಅವರ ಜೊತೆಯಲ್ಲೇ ಇದ್ದಾರೆ.